Friday, March 6, 2026
HomeBusiness'ಗೃಹಲಕ್ಷ್ಮಿ'ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ, 28 ಸಾವಿರ ಕೋಟಿ ಹಂಚಿಕೆ

‘ಗೃಹಲಕ್ಷ್ಮಿ’ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ, 28 ಸಾವಿರ ಕೋಟಿ ಹಂಚಿಕೆ

ಬೆಂಗಳೂರು: 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ 28 ಸಾವಿರ ಕೋಟಿ ರೂ ಹಂಚಿಕೆ ಮಾಡಿದ್ದಾರೆ.

ಹೌದು.. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಘೋಷಿಸಿದ್ದು, ಯೋಜನೆ ಅಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ನೆರವಾಗುವುದರ ಜತೆಗೆ ಅಭಿವೃದ್ಧಿ ಯೋಜನೆಗಳನ್ನೂ ಮುಂದುವರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಈ ಬಜೆಟ್‌ನಲ್ಲಿ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದರು.

Suhas
Suhashttps://onlinemaharashtra.com/
Suhas Bhokare is a journalist covering News for https://onlinemaharashtra.com/
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments