ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ʻಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆʼ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2026-2027ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಈ ತಾಣಗಳಲ್ಲಿ Sea Plane ಹಾಗೂ Heli Taxi ಗಳ ಮುಖಾಂತರ ಸಂಪರ್ಕ ಕಲ್ಪಿಸುವುದರ ಜೊತೆಗೆ Joy Ride ಹಾಗೂ River Cruise ಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುವುದು ಎಂದರು.
ರಾಜ್ಯಕ್ಕೆ ಆಗಮಿಸುವ ಎಲ್ಲ ಪ್ರವಾಸಿಗಳಿಗೆ ಸಕಾರಾತ್ಮಕ ಅನುಭವ ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ ನೀಡಲಾಗುತ್ತದೆ ಮತ್ತು ₹1 ಕೋಟಿ ಒದಗಿಸಲಾಗುವುದು. ಪ್ರವಾಸ ಮಾರ್ಗದರ್ಶಕರಿಗೆ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯ ತರಬೇತಿ ನೀಡಲು ಡಿಪ್ಲೋಮಾ ಕೋರ್ಸ್ ಅನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಿಕ್ಕಿದ್ದು ಮತ್ತೇನು?
1. ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿ.