Last Updated:
ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಜಿಲ್ಲೆಗಳಲ್ಲಿ ಫೆಬ್ರವರಿ 27ರ ತನಕ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಕರಾವಳಿ (Coastal) ಜಿಲ್ಲೆಗಳಲ್ಲಿ ಫೆಬ್ರವರಿ 27ರ ತನಕವೂ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಹಿನ್ನೆಲೆ ಮಳೆಯಾಗುವ (Rain) ನಿರೀಕ್ಷೆಗಳಿವೆ. ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಕೇಂದ್ರವಾಗಿ ಉಂಟಾಗುವ ವಾಯುಭಾರ ಕುಸಿತವು ಪೂರ್ವಾಭಿಮುಖವಾಗಿ ಚಲಿಸುವ ಲಕ್ಷಣಗಳಿದ್ದು, ಇದರಿಂದ ಬಂಗಾಳಕೊಲ್ಲಿಯ (Bay of Bengal) ಕಡೆಯಿಂದ ಈಗ ಬೀಸುತ್ತಿರುವ ಗಾಳಿಯು ದುರ್ಬಲಗೊಳ್ಳವುದರಿಂದ ಮಳೆಯ ಪರಿಸ್ಥಿತಿ ಕಾದು ನೋಡಬೇಕಾಗಿದೆ. ಮಳೆಯು ಮುನ್ಸೂಚನೆಯಲ್ಲಿದ್ದಷ್ಟು ಪ್ರಮಾಣದಲ್ಲಿ ಇರುವ ಸಾಧ್ಯತೆಗಳು ಕಡಿಮೆ ಇರಬಹುದು.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಹವಾಮಾನ ವೈಪರೀತ್ಯದಿಂದಾಗಿ ಸಾರ್ವಜನಿಕ ಜೀವನಕ್ಕೆ ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಸಿದೆ. ಬಲವಾದ ಗಾಳಿಯಿಂದಾಗಿ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಬಹುದು. ಮಳೆಯ ಕಾರಣದಿಂದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.
ಮರದ ಟೊಂಗೆಗಳು ಮುರಿದು ಬೀಳುವ ಸಂಭವವಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಆಯ್ದ ಭಾಗದಲ್ಲಿ ಮಳೆಯಾಗುತ್ತದೆ, ಆದರೆ ಮಿಂಚು-ಗುಡುಗು, ಸಿಡಿಲಿನ ಬಗ್ಗೆ ಹವಾಮಾನ ಇಲಾಖೆಯವರು ಎಚ್ಚರಿಸಿದ್ದಾರೆ.
ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಅಂದರೆ ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿಯ ಹತ್ತಿರ ವಾತಾವರಣದ ಮೇಲ್ಪದರದಲ್ಲಿ ಒಂದು ಚಂಡಮಾರುತದ ಮಾದರಿಯ ಸುಳಿಗಾಳಿ ಉಂಟಾಗಿದೆ.
Bangalore,Karnataka
