Last Updated:
ಕರಾವಳಿ ಕರ್ನಾಟಕದ ಜೊತೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆ ನಾಡಿದ್ದು ಎರಡು ದಿನ ಬುತೇಕ ಜಿಲ್ಲೆಗಳಿಗೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು: ಯುಗಾದಿ ಹಬ್ಬಕ್ಕೂ (Ugadhi Festival) ಮುನ್ನವೇ ರಾಜ್ಯದಲ್ಲಿ ಆಲಿಕಲ್ಲು ಮಳೆಯ (Hailstrom) ಅಬ್ಬರ ಜೋರಾಗಿದೆ. ಬೇಸಿಗೆಯ (Summer) ಬಿಸಿಲಿಗೆ ಬೆಂದು ಹೋಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು, ಚಾಮರಾಜನಗರ, ಬೆಳಗಾವಿ ಧಾರವಾಡ ಹೀಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಸಮೇತ ಅಬ್ಬರಿಸಿದ್ದಾನೆ. ಇನ್ನು ಈ ಬೆನ್ನಲ್ಲೇ ಇನ್ನು ಎರಡು ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ (Meteorological Department) ಮೂನ್ಸೂಚನೆ ನೀಡಿದೆ.
ಗದಗ ಜಿಲ್ಲೆ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ತಮ್ಮ ಜಮೀನಿನಲ್ಲಿದ್ದ ಮೆಣಸಗಿ ಗ್ರಾಮದ ನಿಂಗಪ್ಪ ಅಮಾತ್ಯ (58) ಮೃತ ಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡಲು ಹೋಗಿದ್ದ ವೇಳೆ ಈ ದುರಂತ ಘಟನೆ ನಡೆದಿದೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರಾವಳಿ ಕರ್ನಾಟಕದ ಜೊತೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆ ನಾಡಿದ್ದು ಎರಡು ದಿನ ಬುತೇಕ ಜಿಲ್ಲೆಗಳಿಗೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ, ಚಾಮರಾಜನಗರ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ.
ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದ ಮೇಲೆ ಚಂಡಮಾರುತದ ಪರಿಚಲನೆ ಗೋಚರಿಸುತ್ತಿದೆ. ಇದರಿಂದಾಗಿ, ಪಶ್ಚಿಮ ಘಟ್ಟಗಳು ಮತ್ತು ರಾಜ್ಯದಲ್ಲಿ ಮಳೆಯಾಗುತ್ತಿವೆ. ಹವಾಮಾನ ಇಲಾಖೆಯ ಪ್ರಕಾರ, ಹಲವಾರು ರಾಜ್ಯಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಶಿಡ್ಲಘಟ್ಟದಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿರುವ ಘಟನೆ ನಡೆದಿದೆ. ನಗರದ 5ನೇ ವಾರ್ಡಿನ ಶರತ್ ಬಡಾವಣೆಯಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ತೆಂಗಿನಮರದಲ್ಲಿ ಹಟಾಥ್ ಬೆಂಕಿ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಬಳಿಕ ಅಗ್ನಿಶಾಮಕದಳ ಸಿಬ್ಬಂದಿಗೆ ಸ್ಥಳೀಯರು ಕರೆ ಮಾಡಿ ಮಾಹಿತಿ ನೀಡಿದ್ರು. ಸ್ಥಳಕ್ಕೆ ದೌಡಾಯಿಸಿ ಸಿಬ್ಬಂದಿ ತೆಂಗಿನ ಮರದಲ್ಲಿ ಹತ್ತಿದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
