Thursday, February 26, 2026
HomeTechnologySecond PUC Exam: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್​ ಆಗಿದ್ಯಾ? KSEAB ಅಧ್ಯಕ್ಷ ಪ್ರಕಾಶ್...

Second PUC Exam: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್​ ಆಗಿದ್ಯಾ? KSEAB ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಸ್ಪಷ್ಟನೆ |

ಪ್ರಶ್ನೆ ಪತ್ರಿಕೆಗಳ ವಿಡಿಯೋ​ ಹರಿಬಿಟ್ಟ ಕಿಡಿಗೇಡಿಗಳು

ವರ್ಷ ಪೂರ್ತಿ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವ ಕೆಲಸ ನಡೆಯುತ್ತಿದ್ದು, ಕಿಡಿಗೇಡಿಗಳು ವಿದ್ಯಾರ್ಥಿಗಳ ದಾರಿ ತಪ್ಪಿಸುತ್ತಿದ್ದಾರೆ ಎಂದು ಪೋಷಕರು ಕಿಡಿಕಾರುತ್ತಿದ್ದಾರೆ. ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ನಿಕೆ ಎಂಬ ವಿಡಿಯೋ ವೈರಲ್​ ಆಗ್ತಿದೆ.

ವಿಡಿಯೋ ಹರಿಬಿಟ್ಟ ಲೀಕಾಸುರರು

ಕನ್ನಡ, ಇಂಗ್ಲಿಷ್, ಗಣಿತ ಪರೀಕ್ಷೆ ಪ್ರಶ್ನೆ ಪತ್ರಿಕೆ ಎನ್ನಲಾಗ್ತಿರೋ ವಿಡಿಯೋ ತುಣುಕು ರಿಲೀಸ್ ಆಗಿದ್ದು, ಕೆಲ ಪ್ರಶ್ನೆ ಪತ್ರಿಕೆಗಳ ಬ್ಲರ್ ಇಮೇಜ್ ಹರಿದಾಡ್ತಿದೆ. ವಿದ್ಯಾರ್ಥಿಗಳಿಗೆ ಗೊಂದಲ ಮೂಡಿಸುತ್ತಿರುವ ಸೋಶಿಯಲ್ ಮೀಡಿಯಾ ಅಕೌಂಟ್ ಪರಿಶೀಲನೆಗೆ ಪರೀಕ್ಷಾ ಮಂಡಳಿ ಮುಂದಾಗಿದೆ. ಈ ಕುರಿತು ಸೈಬರ್ ಪೊಲೀಸರಿಗೆ ದೂರು ನೀಡಲು ಪರೀಕ್ಷಾ ಮಂಡಳಿ ಮುಂದಾಗಿದೆ.

100ರೂ ಕೊಟ್ರೆ ಸಿಗುತ್ತೆ ಪ್ರಶ್ನೆ ಪತ್ರಿಕೆ 

100 ರೂಪಾಯಿ ಕೊಡಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಕೊಡ್ತೀವಿ ಎಂಬ ಪೋಸ್ಟ್​ಗಳು ವಿದ್ಯಾರ್ಥಿಗಳ ದಾರಿ ತಪ್ಪಿಸುತ್ತಿವೆ. Delta Kannadiga 37 ಖಾತೆಯಿಂದ ಪ್ರಶ್ನೆ ಪತ್ರಿಕೆ ಕೊಡ್ತೀನಿ ಅಂತ ದುಡ್ಡು ಕೀಳ್ತಿದ್ದು, ಜೊತೆಗೆ ಇನ್ನಷ್ಟು ಇನ್ಸ್ಟಾ ಖಾತೆಗಳಲ್ಲಿ ವಿಡಿಯೋ ರಿಲೀಸ್ ಆಗಿದೆ.

KSEAB ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಸ್ಪಷ್ಟನೆ

ದ್ವಿತೀಯ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಅಂತ ನ್ಯೂಸ್ 18 ಕನ್ನಡಕ್ಕೆ KSEAB ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಸ್ಪಷ್ಟನೆ ನೀಡಿದ್ದಾರೆ. ಶಿಕ್ಷಣ ಇಲಾಖೆಗೆ ಯಾವುದೇ ಭಯವೂ ಇಲ್ಲ. ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಬಗ್ಗೆ ಸತತ ಪೋಸ್ಟ್ ಬರ್ತಿದೆ. ಅದೆಲ್ಲಾ ಸುಳ್ಳು ಎಂದಿದ್ದಾರೆ.

ಫೆಬ್ರವರಿ 28ರಿಂದ ದ್ವಿತೀಯ ಪಿಯು ಪರೀಕ್ಷೆ

ಶನಿವಾರದಿಂದ ದ್ವಿತೀಯ ಪಿಯು ಪರೀಕ್ಷೆ-1 ಆರಂಭ ವಾಗ್ತಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆ ನಡೆಯಲಿದ್ದು, ಈ‌ ಬಾರಿ ದ್ವಿತೀಯ ಪಿಯು ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಆಗಿದೆ. ಒಟ್ಟು 1217 ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ.  ಪ್ರತಿ ಕೇಂದ್ರದಲ್ಲೂ ವೆಬ್ ಕಾಸ್ಟಿಂಗ್ ಕಡ್ಡಾಯ ಮಾಡಲಾಗಿದೆ.

ದ್ವಿತೀಯ ಪಿಯು ಪರೀಕ್ಷೆ 1 ವೇಳಾಪಟ್ಟಿ

ಫೆಬ್ರವರಿ 28- ಕನ್ನಡ, ಅರೇಬಿಕ್

ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 3- ಇಂಗ್ಲಿಷ್

ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು,‌ ಸಂಸ್ಕೃತ, ಫ್ರೆಂಚ್

ಮಾರ್ಚ್ 5- ಇತಿಹಾಸ

ಮಾರ್ಚ್ 6- ಭೌತಶಾಸ್ತ್ರ

ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ

ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

ಮಾರ್ಚ್ 10- ಅರ್ಥಶಾಸ್ತ್ರ

ಮಾರ್ಚ್ 11- ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 12- ಹಿಂದಿ

ಮಾರ್ಚ್ 13- ರಾಜ್ಯಶಾಸ್ತ್ರ

ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ

ಮಾರ್ಚ್ 16- ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

(ವರದಿ: ಪ್ರಗತಿ ಶೆಟ್ಟಿ, ನ್ಯೂಸ್​18 ಕನ್ನಡ, ಬೆಂಗಳೂರು)

(ವರದಿ: ಆಶಿಕ್ ಮುಲ್ಕಿ, ನ್ಯೂಸ್​18 ಕನ್ನಡ, ಬೆಂಗಳೂರು)

Suhas
Suhashttps://onlinemaharashtra.com/
Suhas Bhokare is a journalist covering News for https://onlinemaharashtra.com/
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Tutorial de trading en gate.io on Insurance Agency Lead Scoring